Friday, September 20, 2024

ಅಂಗನವಾಡಿ ಮಕ್ಕಳ ತಟ್ಟೆಗೆ ಹಾಕಿದ್ದ ಮೊಟ್ಟೆ ಕಸಿದ ಕಾರ್ಯಕರ್ತೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಪ್ರತಿಕ್ರಿಯೆ

ಬೆಂಗಳೂರು: ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡಿದ್ದ ಮೊಟ್ಟೆ ವಾಪಸ್​ ಪಡೆದಿದ್ದರ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ ಎಂದರು. ಆದ್ರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ ಎಂದರು.

ಇದನ್ನೂ ಓದಿ: ಇನ್ನು 6 ತಿಂಗಳಲ್ಲಿ BJP-JDSನ ಅರ್ಧ ಜನ ಜೈಲಿನಲ್ಲಿರ್ತಾರೆ: ಪ್ರಿಕಾಂಕ್​ ಖರ್ಗೆ ಹೊಸ ಬಾಂಬ್​

ಘಟನೆ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್​ ಮಾಡಲು ಸೂಚಿಸಿದ್ದೇನೆ. ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಓ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES