Friday, September 20, 2024

ಇಂದು ವಯನಾಡಿಗೆ ಮೋದಿ ಭೇಟಿ: ರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುವ ಸಾಧ್ಯತೆ

ಕೇರಳ: ರಾಜ್ಯದ ವಯಾನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ನೂರಾರು ಸಾವುನೋವುಗಳು ಸಂಭವಿಸಿದೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವಯಾನಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ವಯನಾಡ್‌ನ ಮಾಜಿ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭೇಟಿಯ ನಂತರ ಪ್ರಧಾನಿ ವಯನಾಡ್ ಭೂಕುಸಿತವನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಮೋದಿ: Paris Olympics: ಕುಸ್ತಿಯಲ್ಲಿ ಭಾರತಕ್ಕೆ ಕಂಚು ಗೆದ್ದುಕೊಟ್ಟ ಅಮನ್ ಸೆಹ್ರಾವತ್​

“ಮೋದಿ ಜೀ, ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕಾಗಿ ಧನ್ಯವಾದಗಳು. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿ ಒಮ್ಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ, ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಗಾಂಧಿ ಶುಕ್ರವಾರ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES