Friday, September 20, 2024

ರಾಜಸ್ಥಾನ ರಾಯಲ್ಸ್​ ತಂಡದ ಕೋಚ್ ಆಗಿ ರಾಹುಲ್​ ದ್ರಾವಿಡ್ ಆಯ್ಕೆ?

ಬೆಂಗಳೂರು: 2025ರ ಐಪಿಎಲ್ ಪಂದ್ಯಾವಳಿ ವೇಳೆಗೆ ಟೀಂ ಇಂಡಿಯಾದ ಮಾಜಿ ಕೋಚ್​ ರಾಹುಲ್​ ದ್ರಾವಿಡ್​ ಅವರು ಮುಂದಿನ ಕೋಚ್​ ಆಗುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.

ಈಗಾಗಲೇ ದ್ರಾವಿಡ್​ ಜತೆ ಈಗಾಗಲೇ ಫ್ರಾಂಚೈಸಿ ಮಾತುಕತೆ ನಡೆಸಿದ್ದು ದ್ರಾವಿಡ್​ ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ಯಾವುದೇ ಅಧಿಕೃತ ಮಾಹಿತಿ ಇನ್ನೂ ಪ್ರಕಟಗೊಂಡಿಲ್ಲ. ಈ ಹಿಂದೆ ದ್ರಾವಿಡ್​ ರಾಜಸ್ಥಾನ್ ರಾಯಲ್ಸ್​ ತಂಡದ ಪರವೇ 2 ಆವೃತ್ತಿಯಲ್ಲಿ ಕೋಚಿಂಗ್​ ನಡೆಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು.

ಇದನ್ನೂ ಓದಿ: Paris Olympics: ಕುಸ್ತಿಯಲ್ಲಿ ಭಾರತಕ್ಕೆ ಕಂಚು ಗೆದ್ದುಕೊಟ್ಟ ಅಮನ್ ಸೆಹ್ರಾವತ್​

ಇದೀಗ ಎಲ್ಲ ಬಿಸಿಸಿಐ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ದ್ರಾವಿಡ್​ ಮತ್ತೆ ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ ಎನ್ನಲಾಗಿದೆ. ಸದ್ಯ ರಾಜಸ್ಥಾನ್ ತಂಡದ ಹಾಲಿ ಕೋಚ್​ ಆಗಿರುವ ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕರ ಇಂಗ್ಲೆಂಡ್​ ಸೀಮಿತ ತಂಡದ ಕೋಚ್​ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅವರ ಸ್ಥಾನಕ್ಕೆ ದ್ರಾವಿಡ್​ ಅವರನ್ನು ನೇಮಕ ಮಾಡಲು ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ.

RELATED ARTICLES

Related Articles

TRENDING ARTICLES