Thursday, September 19, 2024

ತುಂಗಭದ್ರ ಡ್ಯಾಂ ಗೇಟ್​ ಚೈನ್ ಲಿಂಕ್​ ಕಟ್​: ಜಿಲ್ಲಾಡಳಿತ ಕಟ್ಟೆಚ್ಚರ

ವಿಜಯನಗರ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಮುರಿದು ಹೋಗಿರುವ ಕಾರಣ ಭಾರಿ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿದ್ದು, ಸಂಭಾವ್ಯ ನೆರೆ ಪರಿಸ್ಥಿತಿ ಎದುರಿಸಲು ಬಳ್ಳಾರಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ಈ ಕುರಿತು ವಿಜಯನಗರ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ನದಿಗೆ ಹೆಚ್ಚಿನ ನೀರು ಬಿಡುತ್ತಿರುವುದರಿಂದ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಎಲ್ಲ ವ್ಯವಸ್ಥೆಗಳನ್ನೂ ಮಾಡಿಕೊಳ್ಳಲಾಗಿದೆ. ಕಂಪ್ಲಿ ಹಾಗೂ ಸಿರುಗುಪ್ಪ ತಹಶೀಲ್ದಾ‌ರ್ ಹಾಗೂ ಇತರೆ ತಾಲೂಕು ಮಟ್ಟದ ಅಧಿಕಾರಿಗಳು ಪರಿಸ್ಥಿತಿ ಎದುರಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಜಲಾಯಶಯದ ಗೇಟ್ ಚೈನ್​ ಲಿಂಕ್ ಕಟ್​​: ಅಪಾರ ಪ್ರಮಾಣದ ನೀರು ಹೊರಗೆ

ಜಿಲ್ಲಾ ಮಟ್ಟದ ನೋಡಲ್‌ ಅಧಿಕಾರಿಗಳೂ ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು. ಇತ್ತೀಚೆಗೆ ತುಂಗಭದ್ರಾ ಡ್ಯಾಂನಿಂದ 1.50 ಲಕ್ಷ ಕ್ಯುಸೆಕ್‌ನಷ್ಟು ನೀರು ಹರಿಯಬಿಡಲಾಗಿತ್ತು. ಕಂಪ್ಲಿ-ಗಂಗಾವತಿ ಸೇತುವೆ ಮುಳುಗಿದ್ದು, ಕುಮಾರರಾಮನ ಕೋಟೆವರೆಗೆ ನೀರು ಬಂದಿದ್ದು ಬಿಟ್ಟರೆ ಯಾವುದೇ ಅನಾಹುತವಾಗಿರಲಿಲ್ಲ. ಹೀಗಾಗಿ, ಈಗಲೂ ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES