ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.
ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ ದಿನಗಳಲ್ಲಿ ಬಹುತೇಕರು ಸರಸ್ವತಿಗಿಂತ ಲಕ್ಷ್ಮಿಯನ್ನು ಒಲಿಸಿಕೊಳ್ಳಲೇ ಬಯಸುತ್ತಿರುವುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಾಗಿದೆ.
ಪೂಜೆಯಲ್ಲಿ ಬಳಸಬೇಕಾದ ಸಾಮಗ್ರಿಗಳು?
ಶ್ರೀ ವರಮಹಾಲಕ್ಷ್ಮೀ ಪೂಜೆ ಹೇಗೆ ಮಾಡಬೇಕು?