Friday, September 20, 2024

ಅನ್ನಭಾಗ್ಯ: ಹೆಚ್ಚುವರಿ ಅಕ್ಕಿ ಬದಲಿಗೆ ಎಣ್ಣೆ, ಬೇಳೆ ಸಕ್ಕರೆ?

ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಇದನ್ನೂ ಓದಿ: ವಾಲ್ಮೀಕಿ ಬಹುಕೋಟಿ ಹಗರಣ: ಚಾರ್ಜ್‌ಶೀಟ್ ರೆಡಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೇ ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ನೀಡುತ್ತಿದ್ದು, ಉಳಿದ 5 ಕೆಜಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತಿದೆ. ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ 93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಆಹಾರ ಮತ್ತು ಪಡಿತರ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ ಮುನಿಯಪ್ಪ, ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES