ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ನಿರೀಕ್ಷೆಯಂತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ ನ್ಯಾಯಾಲಯವು ಆದೇಶ ಮಾಡಿದೆ.
ಇಂದು (ಆಗಸ್ಟ್ 14) ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳನ್ನು 24ನೇ ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎದುರು ಹಾಜರುಪಡಿಸಲಾಯ್ತು. ಪೊಲೀಸರ ರಿಮ್ಯಾಂಡ್ ಅರ್ಜಿಯನ್ನು ಪುರಸ್ಕರಿಸಿದ ಮ್ಯಾಜಿಸ್ಟ್ರೇಟರು, ಪ್ರಕರಣದ ಎಲ್ಲ ಆರೋಪಿಗಳಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದರು.
ಇದನ್ನೂ ಓದಿ: ಎಸಿಪಿ ಚಂದನ್‌ಗೆ ಆವಾಜ್ ಹಾಕಿದ್ದ ನಟ ದರ್ಶನ್!
ಬೆಂಗಳೂರು ಜೈಲಿನಲ್ಲಿರುವ ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ ಮೂವರು ಆರೋಪಿಗಳನ್ನು ಪೊಲೀಸರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಈ ಸಮಯದಲ್ಲಿ ಪೊಲೀಸರು, ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಮನವಿ ಮಾಡಿದರು.
ಮನವಿ ಪುರಸ್ಕರಿಸಿದ ನ್ಯಾಯಾಧೀಶ ಜಡ್ಜ್ ವಿಶ್ವನಾಥ್ ಸಿ ಗೌಡರ್ ಅವರು ಎಲ್ಲ ಆರೋಪಿಗಳಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದರು. ಆರೋಪಿಗಳಿಗೆ ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಎಂಟು ಕಾರಣಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ.