ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಖುದ್ದು ಸಚಿವರೇ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ.
AICC ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಭಾಗಿಯಾಗಲು ರಾಷ್ಟ್ರ ರಾಜಧಾನಿಗೆ ಬಂದ DCM ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಬೆಳವಣಿಗೆಗಳ ಕುರಿತು ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಎಸಿಪಿ ಚಂದನ್‌ಗೆ ಆವಾಜ್ ಹಾಕಿದ್ದ ನಟ ದರ್ಶನ್!
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಹೈಕಮಾಂಡ್‌ನ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದರು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದ ಸಚಿವರು, ಗ್ಯಾರಂಟಿಯ ಸಾಧಕ-ಬಾಧಕ, ಲೋಪ-ದೋಷಗಳ ಬಗ್ಗೆ ಮಾಹಿತಿ ನೀಡಿದರು. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆಗೆ ಚರ್ಚಿಸುವುದಾಗಿ ಸುರ್ಜೇವಾಲಾ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.