Tuesday, September 17, 2024

ಸಿಎಂ ಸಿದ್ದರಾಮಯ್ಯನವರದ್ದು ಭಂಡತನ, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು: ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈಸೂರಿನ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್​ ಅವರು ಅನುಮತಿ ನೀಡಿರುವುದರ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೈತಿಕವಾಗಿ ರಾಜೀನಾಮೆ ಕೊಡ್ಬೇಕು: ಆರ್​ ಅಶೋಕ್​

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯ ನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂಬ ಪೋಸ್ಟ್​ ಹಂಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES