Tuesday, September 17, 2024

ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ಅನುಮತಿ

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ.

ಇದನ್ನೂ ಓದಿ: ವೈದ್ಯೆ ಅತ್ಯಾಚಾರ ಖಂಡಿಸಿ ಇಂದು ಓಪಿಡಿ ಬಂದ್‌: ಯಾವ ಸೇವೆ ಲಭ್ಯ? ಯಾವುದು ಅಲಭ್ಯ? ಇಲ್ಲಿದೆ ಮಾಹಿತಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್​, ಎಸಿಎಸ್​ ಅತೀಕ್​ಗೆ ನೋಟಿಸ್​ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್​​​ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿ ತೆರಳಿದ್ದಾರೆ.

RELATED ARTICLES

Related Articles

TRENDING ARTICLES