Friday, September 20, 2024

ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರು: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ವಿರುದ್ಧ ಬಿಜೆಪಿ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ: ಇದು ರಾಜಕೀಯ ಪಿತೂರಿ ಅಜೆಂಡಾ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಸಮ್ಮತಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ. ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES