Tuesday, September 17, 2024

ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಪಾಲರ ಕಚೇರಿ ಈಗ ಬಿಜೆಪಿ ಕಚೇರಿ ಆಗಿದೆ

ಮಂಗಳೂರು: ಸಿಎಂ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ದ ಇದೊಂದು ಷಡ್ಯಂತ್ರ. ಇದು ಒಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು. ಮೋದಿ ಸರ್ಕಾರ ಎಲ್ಲಾ ಸಂವಿಧಾನಿಕ ಹುದ್ದೆಗಳನ್ನ ಸರ್ವನಾಶ ಮಾಡ್ತಿದೆ. ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿದೆ. ರಾಜ್ಯಪಾಲರ ಕಚೇರಿ ಈಗ ಬಿಜೆಪಿ ಕಚೇರಿ ಆಗಿದೆ. ರಾಜ್ಯಪಾಲರು, ತಪ್ಪೇ ಮಾಡದ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗವರ್ನರ್ ಇಷ್ಟು ಕೆಳ ಮಟ್ಟಕ್ಕೆ ಇಳಿದಿದ್ದಾರೆ ಅನ್ನೋದನ್ನ ಇದು ತೋರಿಸ್ತಿದೆ. ಬಿಜೆಪಿಯ ಕೈಗೊಂಬೆಯಾಗಿ ಗವರ್ನರ್ ಆಡ್ತಿದಾರೆ. ನಾವು ಕಾನೂನಿನ ಹೋರಾಟ ಮಾಡ್ತಾ ಇದೇವೆ. ಸಿಎಂ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ದಿನೇಶ್ ಗುಂಡೂರಾವ್​​​​​ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES