Thursday, September 19, 2024

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇಂದು ‘ಕೈ’ ಹೋರಾಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲರ ವಿರುದ್ದ ಕಾಂಗ್ರೆಸ್​ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿಯಿಂದ ಇಲಿ ಪಾಷಾಣ ಸ್ಪ್ರೇ: ವಿದ್ಯಾರ್ಥಿಗಳು ಅಸ್ವಸ್ಥ

ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೂಚನೆ ನೀಡಿದೆ.

ಇ ಮೇಲ್ ಮೂಲಕ ರಾಷ್ಟ್ರಪತಿಗಳಿಗೆ ದೂರು ಕಳುಹಿಸುವಂತೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ಖಂಡಿಸಿ ಕಾಂಗ್ರೆಸ್​ ಕಾರ್ಯಕರ್ತರು ಈಗಾಗಲೇ ಪ್ರತಿಭಟಿಸಿದ್ದಾರೆ. ಜೊತೆಗೆ ಇಂದು ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿ ವತಿಯಿಂದ ಸೂಚಿಸಲಾಗಿದೆ.

 

RELATED ARTICLES

Related Articles

TRENDING ARTICLES