Wednesday, September 18, 2024

ಸಿಎಂ ಪರ ಘಟಾನುಘಟಿ ವಕೀಲರಿಂದ ವಾದ ಮಂಡನೆ

ಬೆಂಗಳೂರು: 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಟಗರು ಎಂದೇ ಖ್ಯಾತರಾರ ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ.ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಬೆಂಗಳೂರಿಗೆ ಬಂದ ಕಪಿಲ್ ಸಿಬಲ್​

ಇನ್ನು ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ ಮತ್ತು ಕಪಿಲ್ ಸಿಬಲ್ ಪ್ರಶಾಂತ್ ಭೂಷಣ್ ಸೇರಿ ಹಲವು ಹಿರಿಯ ವಕೀಲರಿಂದ ವಾದ ಮಂಡನೆಯಾಗಲಿದೆ. ಹೀಗಾಗಿ ಇಂದು ಮಂತ್ರಾಲಯ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್​ ಪ್ರಕರಣವು ನ್ಯಾ.ಹೇಮಂತ್‌ ಚಂದನ್‌ಗೌಡರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.

RELATED ARTICLES

Related Articles

TRENDING ARTICLES