Thursday, September 19, 2024

ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಬೆಂಗಳೂರಿಗೆ ಬಂದ ಕಪಿಲ್ ಸಿಬಲ್​

ಬೆಂಗಳೂರು: ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾನೂನು ಸಮರಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇಂದು ಹೈಕೋರ್ಟ್​ ಮೊರೆ ಹೋಗಲು ಸಿಎಂ ನಿರ್ಧಾರಿಸಿದ್ದು, ಪ್ರಾಸಿಕ್ಯೂಷನ್ ತಡೆ ಕೋರಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ.

ಸದ್ಯ, ಬೆಂಗಳೂರಿಗೆ ಆಗಮಿಸಲಿರುವ ಸುಪ್ರೀಂಕೋರ್ಟ್​ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್​ ಮನು ಸಿಂಘ್ವಿ ಜೊತೆ ಸಿಎಂ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದಾರೆ. ಇಡೀ ಪ್ರಕರಣದ ಬಗ್ಗೆ ವಕೀಲರಿಗೆ ಸಿಎಂ ವಿವರಣೆ ನೀಡಲಿದ್ದಾರೆ. ಬಳಿಕ ಸಿದ್ದರಾಮಯ್ಯ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇಂದು ‘ಕೈ’ ಹೋರಾಟ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ‘ಕೈ’ ಹೋರಾಟ:

ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೂಚನೆ ನೀಡಿದೆ.

ಇ ಮೇಲ್ ಮೂಲಕ ರಾಷ್ಟ್ರಪತಿಗಳಿಗೆ ದೂರು ಕಳುಹಿಸುವಂತೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ಖಂಡಿಸಿ ಕಾಂಗ್ರೆಸ್​ ಕಾರ್ಯಕರ್ತರು ಈಗಾಗ್ಲೇ ಪ್ರತಿಭಟಿಸಿದ್ದಾರೆ. ಜೊತೆಗೆ ಇಂದು ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿ ವತಿಯಿಂದ ಸೂಚಿಸಲಾಗಿದೆ.

RELATED ARTICLES

Related Articles

TRENDING ARTICLES