Friday, September 20, 2024

KPSC ಗೆಜೆಟೆಡ್​ ಪ್ರೊಬೆಷನರಿ ಹುದ್ದೆ: ಪರೀಕ್ಷಾರ್ಥಿಗಳಿಗೆ ಪ್ರಮುಖ ಸೂಚನೆಗಳು

ಬೆಂಗಳೂರು: KPSC ಗೆಜೆಟೆಡ್ ಪ್ರೊಬೇಷನರ್ಸ್‌ (KAS) 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 27ರಂದು ನಡೆಸಲಿದೆ. ಈಗಾಗಲೇ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಹಾಲ್‌ ಟಿಕೆಟ್ ಲಭ್ಯವಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಒಟ್ಟು 384 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಕೆಪಿಎಸ್‌ಸಿ ಮಾಹಿತಿ ಪ್ರಕಾರ 2,10,910 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಮೊದಲು ಆಗಸ್ಟ್ 25ರಂದು ಪರೀಕ್ಷೆ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಅಂದು ಐಬಿಪಿಎಸ್ ಪರೀಕ್ಷೆಗಳು ಇರುವ ಹಿನ್ನಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಆಗಸ್ಟ್ 27ರಂದು ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.

  • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು.
    ಒಎಂಆರ್ ಉತ್ತರ ಹಾಳೆಯಲ್ಲಿನ ಎಲ್ಲಾ ನಮೂದು (Marking) ಗಳನ್ನು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಮಾಡತಕ್ಕದ್ದು.
  • ಪ್ರವೇಶ ಪತ್ರವನ್ನು ಪಡೆದುಕೊಂಡ ಕೂಡಲೇ ಅದರಲ್ಲಿನ ವಿವರಗಳನ್ನು ಪರಿಶೀಲಿಸಿಕೊಳ್ಳುವುದು. ಪ್ರವೇಶ ಪತ್ರದಲ್ಲಿ ಭಾವಚಿತ್ರವು ಸ್ಪಷ್ಟವಾಗಿಲ್ಲದಿದ್ದಲ್ಲಿ ಅಥವಾ ಮುದ್ರಿತವಾಗದಿದ್ದಲ್ಲಿ ಪರೀಕ್ಷಾದಿನದಂದು ಅಭ್ಯರ್ಥಿಯು ಸಿಂಧುವಾದ ತನ್ನ ಗುರುತಿನ ಚೀಟಿಯ ಪ್ರತಿ ಪ್ರವೇಶಪತ್ರದ ಪ್ರತಿ ಹಾಗೂ ಪಾಸ್‌ಪೋರ್ಟ್/ ಸ್ಟ್ಯಾಂಪ್ಅಳತೆಯ 2 ಭಾವಚಿತ್ರಗಳನ್ನು ಕಡ್ಡಾಯವಾಗಿ ಸಂವೀಕ್ಷಕರಿಗೆ ನೀಡಿ ಒಂದು ಭಾವಚಿತ್ರವನ್ನು ನಾಮಿನಲ್ ರೋಲ್ ನಲ್ಲಿನ ನಿಗದಿತ ಅಂಕಣದಲ್ಲಿ ಮತ್ತು ಇನ್ನೊಂದು ಭಾವಚಿತ್ರವನ್ನು ಈ ಸಂಬಂಧ ಸಲ್ಲಿಸುವ ಮುಚ್ಚಳಿಕೆ ಪತ್ರದಲ್ಲಿ ಅಂಟಿಸಿ ದೃಢೀಕರಿಸುವುದು.
  • ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:
  • ಕೆಎಎಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬರೆಯಲು ಆಗಮಿಸುವ ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
  • ಯಾವುದೇ ರೀತಿಯ ಆಭರಣಗಳನ್ನು (Metal and Non metal) ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
  • ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:
  • ಪರೀಕ್ಷೆಯ ಪ್ರವೇಶ ಪತ್ರ (Exam Admit Card). (original Identification card), Passport, PAN CARD, Voter ID, Aadhar-U.I.D., Govt. Employer Id. (or) Driving Licence ಯಾವುದಾದರೊಂದು. ಪಾಸ್‌ಪೋರ್ಟ್‌/ ಸ್ಟ್ಯಾಂಪ್ಅಳತೆಯ 2 ಭಾವ ಚಿತ್ರಗಳು (Photo). ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳು. ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ. (ನಕಲು ಪ್ರತಿ ಅಥವಾ ಸ್ಕ್ಯಾನ್ ಮಾಡಿರುವ ಪ್ರತಿಯನ್ನು ಅನುಮತಿಸಲಾಗುವುದಿಲ್ಲ).
  • ಒಟ್ಟು ಎರಡು ಪತ್ರಿಕೆಗಳ ಪರೀಕ್ಷೆಗಳು ಆಗಸ್ಟ್ 27ರ ಮಂಗಳವಾರ ನಡೆಯಲಿದೆ. ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1 ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ.

RELATED ARTICLES

Related Articles

TRENDING ARTICLES