Thursday, September 19, 2024

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ, ಕಾಲ್ನಡಿಗೆ ಜಾಥ

ರಾಜ್ಯಪಾಲರ ನಡೆ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಸುಭಾಷ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ಮಾಡಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಅಪುರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ರ್ಯಾಲಿಯಲ್ಲಿ‌ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಸಚಿವ ಶರಣಬಸಪ್ಪ ದರ್ಶನಾಪೂರ ಹಾಗೂ ಶಾಸಕ ವೇಣುಗೋಪಾಲ ನಾಯಕ ಸೇರಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಕಲಬುರಗಿಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ರ್ಯಾಲಿ:

ರಾಜ್ಯಪಾಲರ ನಡೆಗೆ ರಾಜ್ಯದೆಲ್ಲೆಡೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯಪಾಲರ ನಡೆ ಖಂಡಿಸಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರೋಟೆಸ್ಟ್ ಮಾಡಲಾಗಿದೆ.

ಜಿಲ್ಲಾಧ್ಯಕ್ಷ‌ ಜಗದೇವ್ ಗುತ್ತೇದಾರ್ ನೇತೃತ್ವದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಖನೀಜ್ ಫಾತೀಮಾ ಸೇರಿ ಕಾಂಗ್ರೆಸ್​​​​ ನಾಯಕರು, ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಹೋರಾಟ.. ನಂಜನಗೂಡು ಸ್ತಬ್ಧ:

ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೆ ನರಸೀಪುರ ಪಟ್ಟಣ ಬಂದ್‌ಗೆ ಕಾಂಗ್ರೆಸ್ ಸಮಿತಿ ಕರೆ ನೀಡಿತ್ತು. ಹೀಗಾಗಿ ಮೆಡಿಕಲ್ಸ್, ಆಸ್ಪತ್ರೆ, ತುರ್ತು ಸೇವೆ ಹೊರತುಪಡಿಸಿ ಉಳೆದಲ್ಲ ಬಂದ್‌ ಆಗಲಿವೆ.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯಪಾಲರ ವಿರುದ್ದ ಕಾಲ್ನಡಿಗೆ ಜಾಥಾ:

ರಾಜ್ಯಪಾಲರ ನಡೆ ಖಂಡಿಸಿ ಕೋಲಾರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಕಾಲ್ನಡಿಗೆ ಜಾಥಾ, ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಛೇರಿ ತಲುಪಿತು. ಈ ವೇಳೆ ರಾಜ್ಯಪಾಲರ ನಡೆ ವಿರೋದಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ ಸೇರಿ ಹಲವರು ಭಾಗಿಯಾಗಿದ್ದರು.

RELATED ARTICLES

Related Articles

TRENDING ARTICLES