ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದು ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳ ಕಾಸರಗೋಡಿನ ಕೊಳತ್ತೂರು ನಿವಾಸಿ ವಿ. ಪ್ರಿಯೇಶ್, ಮುಳಿಯಾರು ನಿವಾಸಿ ವಿನೋದ್ ಕುಮಾರ್ ಕೆ, ಪೆರಿಯಾ ನಿವಾಸಿ ಅಬ್ದುಲ್ ಖಾದರ್ ಎಸ್.ಎ, ಪುತ್ತೂರಿನ ಆಯೂಬ್ ಖಾನ್ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 500ರೂಪಾಯಿ ಮುಖಬೆಲೆಯ 2,13,500 ರೂಪಾಯಿಯ 427 ಖೋಟಾ ನೋಟುಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಬಂಧಿತರಿಂದ 4 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: HDK ವಿರುದ್ದ ಪ್ರಾಸಿಕ್ಯೂಷನ್ಗೆ SIT ಮನವಿ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಇನ್ನು, ಬಂಧಿತ ಆರೋಪಿಗಳು ಯೂಟ್ಯೂಬ್ ನೋಡಿ ನೋಟು ಮುದ್ರಣ ಕಲಿತುಕೊಂಡಿದ್ದರಂತೆ. ಆರೋಪಿ ಪ್ರಿಯೇಶ್ ಕಾಸರಗೋಡಿನ ಚೆರ್ಕಳ ಎಂಬಲ್ಲಿ ಪ್ರಿಂಟಿಂಗ್ ಪ್ರೆಸ್ನಲ್ಲಿ ನಕಲಿ ನೋಟು ಮುದ್ರಣ ಮಾಡುತ್ತಿದ್ದನಂತೆ. ಸದ್ಯ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.