Wednesday, January 22, 2025

ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಸ್ಫೋಟಕ ಹೇಳಿಕೆ

ಚಾಮರಾಜನಗರ : ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಎತ್ತಿ ಹಾಕಿರಬಹುದು ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಇಂದು ಸಚಿವ ರಾಮಲಿಂಗಾರೆಡ್ಡಿ ಅವರು ಜಿಲ್ಲೆಯಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾತಾಡಿದರು.

ರಾಜ್ಯ ಕಾಂಗ್ರೆಸ್ ಪ್ರತಿಭಟನೆ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಭೂತ ದಹನ ಮಾಡಿ ಅವಮಾನ ಮಾಡಿದ್ದಾರೆಂಬ ಬಿಜೆಪಿ ಆರೋಪದ ಬಗ್ಗೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದ ಜೊತೆ ಮಾತಾಡಿದ ಅವರು, ನಮ್ಮವರು ಯಾರೂ ಸಹ ಅವ್ಯಾಚ ಶಬ್ದ ಬಳಸಿಲ್ಲ. ರಾಜ್ಯಪಾಲರಿಗೆ ಅವಮಾನ ಮಾಡುವ ಕೆಲಸ ನಮ್ಮ ಮಂತ್ರಿಗಳಾಗಲಿ, ಕಾರ್ಯಕರ್ತರಾಗಲಿ ಮಾಡಿಲ್ಲ. ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಹಾಕ್ತಿದ್ದಾರೆ ಎಂದರು.

ಇನ್ನು ರಾಜ್ಯಪಾಲರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ತಿಲ್ಲ. ಬಿಜೆಪಿಯವರ ಕೈಗೊಂಬೆಯಾಗಿದ್ದಾರೆ ಎಂದು ನಮ್ಮವರು ಹೇಳಿದ್ದಾರ ಅಷ್ಟೇ. ರಾಜ್ಯಪಾಲರ ಭಾವ ಚಿತ್ರಕ್ಕೆ ಚಪ್ಪಲಿಯಿಂದ ಹೊಡೆದಿದ್ದರೆ ಅದು ತಪ್ಪು. ಈ ಕೆಲಸವನ್ನ ಯಾರೇ ಮಾಡಿದ್ದರು ತಪ್ಪು. ಭೂತ ದಹನ ಸಹಜ ಪ್ರಧಾನಮಂತ್ರಿ, ಮುಖ್ಯ ಮಂತ್ರಿ ರಾಜ್ಯಪಾಲರು ಹೀಗೆ ಎಲ್ಲರ ಭೂತದಹನ ಮಾಡುವುದು ಸಾಮಾನ್ಯ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಇದೇ ಕೆಲಸ ಮಾಡ್ತಿದ್ದರು. ರಾಜ್ಯಪಾಲರು ಮಾಡಿದ ತಪ್ಪನ್ನ ಎತ್ತಿತೋರಿಸುವುದರಲ್ಲಿ ತಪ್ಪೇನು ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್​​ ಪ್ರತಿಭಟನೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES