Wednesday, September 18, 2024

ಬಿಜೆಪಿ ಪ್ರತಿಭಟನೆ ಪ್ರಾಣಿಹಿಂಸೆ ವಿರುದ್ಧ ಕಟುಕರ ಪ್ರತಿಭಟನೆಯಂತೆ; ಸಿಎಂ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಟ; ಯತ್ನಾಳ್​​

ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ. ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಅಂಬೇಡ್ಕರ್​​ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ. ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ ಎಂದಿದ್ದಾರೆ.

RELATED ARTICLES

Related Articles

TRENDING ARTICLES