Wednesday, September 18, 2024

ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಟ; ಯತ್ನಾಳ್​​

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​​​ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್​ನಲ್ಲಿ ಹೋರಾಟ ಮುಂದುವರಿಸಿದ್ದೀನಿ ಎಂದರು.

ಹರಿಯಾಣ ವಿಧಾನಸಭಾ ಚುನಾವಣೆ; 89 ಕ್ಷೇತ್ರಗಳಿಗೆ ಕಾಂಗ್ರೆಸ್​​​​​ ಅಭ್ಯರ್ಥಿಗಳ ಘೋಷಣೆ

ನೀವೂ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ಅಂತಾ ಸಿಬಿಐನವರಿಗೂ ಮನವಿ ಮಾಡಿದ್ದೇವೆ.. ನಮ್ಮ ವಕೀಲರ ಜೊತೆ ಚರ್ಚೆ ನಡೆಸಿದ್ದೇನೆ. ಬಹುಶಃ ಸೆಪ್ಟೆಂಬರ್​ 17 ರಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆಗೆ ಬರಬಹುದು ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಅನುಮತಿ ನೀಡುತ್ತು. ಆದರೆ ಅದನ್ನು ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆದಿತ್ತು. ಈ ಆದೇಶ ರದ್ದು ಕೋರಿ ಸಿಬಿಐ ಹಾಗೂ ಯತ್ನಾಳ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದರು. ಆದರೆ ಹೈಕೋರ್ಟ್​​​ ಆ ಅರ್ಜಿಗಳನ್ನು ವಜಾಗೊಳಿಸಿತ್ತು.

RELATED ARTICLES

Related Articles

TRENDING ARTICLES