Wednesday, September 18, 2024

ಹರಿಯಾಣ ವಿಧಾನಸಭಾ ಚುನಾವಣೆ; 89 ಕ್ಷೇತ್ರಗಳಿಗೆ ಕಾಂಗ್ರೆಸ್​​​​​ ಅಭ್ಯರ್ಥಿಗಳ ಘೋಷಣೆ

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಇನ್ನೂ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಕಾಂಗ್ರೆಸ್ ಪಕ್ಷ 89 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಸಿಪಿಐ(ಎಂ)ಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಆರು ಪಟ್ಟಿಗಳ ಮೂಲಕ 89 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ದೇಶದಲ್ಲಿ ಕಾಂಗ್ರೆಸ್ ಕ್ಲೋಸ್​; ಕೆ.ಎಸ್​.ಈಶ್ವರಪ್ಪ​​​​​ 

ಎಎಪಿ ಜೊತೆ ಕಾಂಗ್ರೆಸ್​ ಮೈತ್ರಿ ಇಲ್ಲ ಎಂದು ಹೇಳಿಕೊಂಡಿದೆ. ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿದೆ. ಭಿವಾನಿ ವಿಧಾನಸಭಾ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ. ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದರೊಂದಿಗೆ, ಕಾಂಗ್ರೆಸ್ ಸಿಪಿಐ(ಎಂ)ನೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದೆ.

ಸಂಸದ ರಣದೀಪ್ ಸುರ್ಜೆವಾಲಾ ಅವರ ಪುತ್ರ ಆದಿತ್ಯ ಸುರ್ಜೆವಾಲಾ, ಪರಿಮಳಾ ಪರಿ, ಸಚಿನ್ ಕುಂಡು, ಸರ್, ರೋಹಿತ್, ನರೇಶ್ ಸಲ್ವಾಲ್, ಪತ್ರಕರ್ತ ಸರ್ವ ಮಿತ್ರ ಕಂಬೋಜ್, ಮಾಜಿ ಸಚಿವ ರಂಜಿತ್ ಚೌಟಲಾ ಸೇರಿದಂತೆ ಹಲವರು ಕಣದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಎಎಪಿ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಮೈತ್ರಿ ಮಾತುಕತೆಗೆ ಇತಿಶ್ರೀ ಹಾಡಿ ಕಾಂಗ್ರೆಸ್ ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿತು. ಸಿಪಿಐ(ಎಂ) ಪಕ್ಷಕ್ಕೆ ಮಾತ್ರ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ.

RELATED ARTICLES

Related Articles

TRENDING ARTICLES