Wednesday, September 18, 2024

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​​​​​​​ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್​

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್​​ ಕುರಿತ ತೀರ್ಪನ್ನು ಹೈಕೋರ್ಟ್​ ಕಾಯ್ದಿರಿಸಿದೆ. ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿದ ಬಳಿಕ ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ: ಹಳೆ ಮನೆ ಕೆಡಹುವಾಗ ಲಿಂಟಲ್​​ ಕುಸಿದು ಇಬ್ಬರು ಸ್ಥಳದಲ್ಲೇ ಸಾವು

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಅನುಮತಿ ನೀಡಿರುವ ಪ್ರಾಸಿಕ್ಯೂಷನ್​​​​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್​ ಶೆಟ್ಟಿ ವಾದ ಮಂಡಿಸಿದರು. ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.

RELATED ARTICLES

Related Articles

TRENDING ARTICLES