Sunday, October 6, 2024

ಬರ್ತಿದೆ ಹೊಚ್ಚ ಹೊಸ ಶೋ ‘ಸುವರ್ಣ ಸೆಲೆಬ್ರಿಟಿ ಲೀಗ್​’

ಇದೇ ಭಾನುವಾರದಿಂದ ಸಂಜೆ 7 ಗಂಟೆಗೆ ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ ಸುವರ್ಣ ಸೆಲೆಬ್ರಿಟಿ ಲೀಗ್​ ಆರಂಭವಾಗುತ್ತಿದೆ. ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಭರ್ಜರಿಯಾಗಿ ಸಜ್ಜಾಗಿದೆ ಸ್ಟಾರ್ ಸುವರ್ಣ. ವೀಕೆಂಡ್​ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊಚ್ಚ ಹೊಸ ಶೋ “ಸುವರ್ಣ ಸೆಲೆಬ್ರಿಟಿ ಲೀಗ್” ಶುರುವಾಗುತ್ತಿದೆ.

ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ. ಇದರಲ್ಲಿ ಒಟ್ಟು 2 ತಂಡಗಳಿರುತ್ತವೆ. 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ.

ಈ ಜಟಾಪಟಿಯಲ್ಲಿ ಯಾವ ತಂ ಡ ಗೆದ್ದು ಸುವರ್ಣ ಸೆಲೆಬ್ರಿಟಿ ಲೀಗ್ ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.
ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ದೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್’ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ.

ಸುವರ್ಣ ಸೆಲೆಬ್ರಿಟಿ ಲೀಗ್ ಶೋ ಲಾಂಚ್​ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ, ಕಥೆಯೊಂದು ಶುರುವಾಗಿದೆ ಧಾರಾವಾಹಿ ಖ್ಯಾತಿಯ ಚಂದು ಗೌಡ, ಆಸೆ ಧಾರಾವಾಹಿ ಖ್ಯಾತಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, ಗೌರಿಶಂಕರ ಧಾರಾವಾಹಿ ಖ್ಯಾತಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ ಕಾಮಿಡಿ ಗ್ಯಾಂಗ್ಸ್ ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES