Thursday, September 19, 2024

ಪ್ರಜ್ವಲ್​ ರೇವಣ್ಣ ವಿರುದ್ಧ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಇದೀಗ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. 3ನೇ ಅತ್ಯಾಚಾರ ಪ್ರಕರಣದಲ್ಲಿ ಎಸ್​​ಐಟಿ ಅಧಿಕಾರಿಗಳು
42ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

1691 ಪುಟಗಳ ಸುದೀರ್ಘವಾದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಚಾರ್ಜ್​ಶೀಟ್​​ನಲ್ಲಿ 120 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯೆ ನೀಡಿದ್ದ ದೂರಿನ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ಎಸ್​​ಐಟಿ ಅಧಿಕಾರಿಗಳು ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷ್ಯವನ್ನಾಗಿ ಪರಿಗಣಿಸಿದ್ದಾರೆ. ಇನ್ನು ಅಧಿಕಾರಿಗಳು ಹಲವಾರು ಅಂಶಗಳನ್ನು ಚಾರ್ಜ್ ಶೀಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

RELATED ARTICLES

Related Articles

TRENDING ARTICLES