ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಇದೀಗ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. 3ನೇ ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು
42ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
1691 ಪುಟಗಳ ಸುದೀರ್ಘವಾದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಚಾರ್ಜ್ಶೀಟ್ನಲ್ಲಿ 120 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯೆ ನೀಡಿದ್ದ ದೂರಿನ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.
ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷ್ಯವನ್ನಾಗಿ ಪರಿಗಣಿಸಿದ್ದಾರೆ. ಇನ್ನು ಅಧಿಕಾರಿಗಳು ಹಲವಾರು ಅಂಶಗಳನ್ನು ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ.