ದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕೇಜ್ರಿವಾಲ್‌ಗೆ 6 ತಿಂಗಳ ಬಳಿಕ ಜಾಮೀನು ಮಂಜೂರಾಗಿದೆ.
ಗಮನಿಸಿ: ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ
ಶುಕ್ರವಾರ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂಗೆ ಕೊನೆಗೂ ಜಾಮೀನು ದೊರಕಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. 10 ಲಕ್ಷ ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಒದಗಿಸುವಂತೆ ಸುಪ್ರೀಂಕೋರ್ಟ್ ಅರವಿಂದ ಕೇಜ್ರಿವಾಲ್‌ಗೆ ಸೂಚನೆ ನೀಡಿದೆ. ಮಾರ್ಚ್ 21 ರಂದು ಅಬಕಾರಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಬಂಧನವಾಗಿತ್ತು. ಸಿಬಿಐ ದಾಖಲಿಸಿದ್ದ ಕೇಸ್‌ನಲ್ಲಿ ಕೇಜ್ರಿವಾಲ್‌ಗೆ ಜಾಮೀನು ದೊರಕಿದೆ. ಇನ್ನು ಈ ಪ್ರಕರಣ ಸಂಬಂಧ ಹೇಳಿಕೆ ನೀಡದಂತೆ ಕೋರ್ಟ್ ಆದೇಶ ಹೊರಡಿಸಿದೆ.