Sunday, October 6, 2024

ಕಿಲ್ಲಿಂಗ್​ ಸ್ಟಾರ್​​ ದರ್ಶನ್​​ & ಗ್ಯಾಂಗ್​​​​​ನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ನಟ ದರ್ಶನ್​ ಹಾಗೂ ಆತನ ಗ್ಯಾಂಗ್​ನ ಇತರ ಆರೋಪಿಗಳಿಗೆ ಸೆಪ್ಟೆಂಬರ್​​​ 17ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.

ನಟ ದರ್ಶನ್​​​ ಸೇರಿದಂತೆ 17 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಟ ದರ್ಶನ್ ಹಾಗೂ ಇತರೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

ರಾಜ್ಯದ ವಿವಿಧ ಜೈಲುಗಳಲ್ಲಿರುವ ಆರೋಪಿಗಳು 24 ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಾದರು. ಇನ್ನು ನಿನ್ನೆಯೂ ಸಹ 17 ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಎಲ್ಲಾ ಆರೋಪಿಗಳಿಗೆ ಒಂದು ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಸಿದ್ದರು.

RELATED ARTICLES

Related Articles

TRENDING ARTICLES