ಕೋಲಾರ: ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪ ಹಿನ್ನೆಲೆ ಬಿಜೆಪಿ ಶಾಸಕ ಮುನಿರತ್ನರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ನಂಗ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂಗಲಿ ಠಾಣೆ ಇನ್ಸ್ಪೆಕ್ಟರ್ ಅರ್ಜುನ್ ಗೌಡ ಹಾಗೂ ಎಸ್ಬಿ ಡ್ಯೂಟಿಯಲ್ಲಿದ್ದ ವಿಜಯ್ ಅವರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಇನ್ನು ಭಾನುವಾರ ಹಾಗೂ ಸೋಮವಾರ ಕೋರ್ಟ್ಗೆ ರಜೆ ಇರುವ ಹಿನ್ನೆಲೆ ಎರಡು ದಿನ ಜಾಮೀನು ಸಿಗುವುದಿಲ್ಲ.
ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಈ ಆರೋಪ ಸಂಬಂಧ ಉತ್ತರ ನೀಡುವಂತೆ ಬಿಜೆಪಿ ಶಿಸ್ತು ಸಮಿತಿ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದೆ. 5 ದಿನಗಳ ಒಳಗೆ ಉತ್ತರ ನೀಡುವಂತೆ ಶಿಸ್ತು ಸಮಿತಿ ನೋಟಿಸ್ ನೀಡಿದೆ.