Friday, December 27, 2024

MUDA SCAM CASE : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್​ ಆದೇಶ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಹೈಕೋರ್ಟ್‌ ಒಪ್ಪಿಗೆ ನೀಡಿದೆ. ಇದೀಗ ಇಂದು (ಸೆಪ್ಟೆಂಬರ್‌ 25) ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ ಸಿಆರ್‌ಪಿಸಿ ಕಾಯ್ದೆ ಉಲ್ಲೇಖಿಸಿ ಮೈಸೂರು ಲೋಕಾಯುಕ್ತ ಪೊಲೀಸರ ತನಿಖೆಗೆ ಆದೇಶ ಹೊರಡಿಸಿದೆ.

3 ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಡಿಸೆಂಬರ್‌ 24ರೊಳಗೆ ವರದಿ ಸಲ್ಲಿಕೆ ಮಾಡಲು ಸೂಚನೆ ನೀಡಿದೆ.

ಈ ಕುರಿತು ಮೈಸೂರು ಲೋಕಾಯುಕ್ತ ಎಸ್‌ಪಿಗೆ ತನಿಖೆ ನಡೆಸುವಂತೆ ಆದೇಶ ನೀಡಿದೆ. CrPC 153 (3) ಕಾಯ್ದೆಯಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ ತನಿಖೆಗೆ ಸಹಕರಿಸಬೇಕೆಂದು ಆದೇಶಹೊರಡಿಸಿದೆ.

ಮೈಸೂರು ಲೋಕಾಯುಕ್ತ ಪೊಲೀಸರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಎಫ್‌ಐಆರ್‌ ಕೂಡ ದಾಖಲಿಸಬಹುದು. ಜೊತೆಗೆ ವಶಕ್ಕೆ ಕೂಡ ಪಡೆಯಬಹುದು. ವಿಶೇಷ ಕೋರ್ಟ್‌ನ ನ್ಯಾ.ಗಜಾನನ ಭಟ್‌ ಈ ಆದೇಶವನ್ನು ನೀಡಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯ ಇದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಡೆಸಿದೆ.

RELATED ARTICLES

Related Articles

TRENDING ARTICLES