Sunday, October 6, 2024

ಹೆಚ್ಡಿಕೆ ವಿರುದ್ಧ ಅವಹೇಳನಕಾರಿ ಪದ ಬಳಕೆ : ಕ್ಷಮೆಯಾಚಿಸಲು ಕೇಂದ್ರ ಸಚಿವ ಜೋಶಿ ಆಗ್ರಹ

ಕೇಂದ್ರ ಸಚಿವ ಎಚ್​.ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗಿತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡೆಕ್ಟ್ ನಿಯಮದ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.

ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದ ಬಳಸಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು. ಮುಂದಿನ ದಿನಗಳಲ್ಲಿ ಇದಕ್ಕೆ ಅವರು ತಕ್ಕ ಬೆಲೆ ತರಬೇಕಾಗಿತ್ತದೆ ಎಂದು ಎಚ್ಚರಸಿದರು.

ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಕೆ ಮಾಡಿರುವುದು ರಾಜ್ಯ ಸರ್ಕಾರದ ಆಡಳಿತಕ್ಕೆ ಹಿಡಿದ ಕೈನ್ನಡಿ. ಇದು ಕಾಂಗ್ರೆಸ್​ಗೆ ಮುಳುವಾಗಲಿದೆ . ಕಾಂಗ್ರೆಸ್ ಎಂತೆಂಥ ಅಧಿಕಾರಿಗಳನ್ನು ಬೆಳಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕಿಡಿ ಕಾರಿದರು.

RELATED ARTICLES

Related Articles

TRENDING ARTICLES