Saturday, October 5, 2024

Mysuru Dasara 2024 : KSRTC ನಿಗಮದಿಂದ 2 ಸಾವಿರ ಹೆಚ್ಚುವರಿ ಬಸ್ ಕಾರ್ಯಚರಣೆ

ಬೆಂಗಳೂರು : ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಿನ್ನಲೆಯಲ್ಲಿ ಸಾಲು ಸಾಲು ರಜೆಗಳು ಬಂದಿದ್ದು. ಜನರು ಊರಿಗಳಿಗೆ ಹೋಗಲು ಅನುಕೂಲವಾಗುವಂತೆ ಕೆಎಸ್ಆರ್​ಟಿಸಿ ಇಂದ ಹೆಚ್ಚಿನ ಬಸ್​ಗಳನ್ನು ನಿಯೋಜಿಸಲಾಗಿದೆ. ರಾಜ್ಯ ಮತ್ತು ಹೊರರಾಜ್ಯಗಳಿಗೆ ಹೋಗಲು ಅನುಕೂಲವಾಗುವಂತೆ ಒಟ್ಟು 2000 ಬಸ್​ಗಳನ್ನು ನೇಮಿಸಲಾಗಿದೆ.

ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು. ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸೇರಿದಂತೆ ವಿವಿಧ ಬಸ್​ಗಳು ಕಾರ್ಯಚರಣೆ ನಡೆಸಲಿವೆ.

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಚರಣೆ ಇರಲಿದ್ದು. ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್​ಗಳು  ಕಾರ್ಯಾಚರಣೆ ನಡೆಸಲಿವೆ.

ಮೈಸೂರು ದಸರಾ-2024 ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದ್ದು. ಜೊತೆಗೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್​ಎಸ್ ಅಣೆಕಟ್ಟು, ಶ್ರೀರಂಗಪಟ್ಟಣ ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಸೇರಿದಂತೆ  ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು ಹೆಚ್ಚುವರಿ 400 ಬಸ್​ಗಳನ್ನು ಕಾರ್ಯಚರಣೆ ನಡೆಸಲಿವೆ.

ಅ. 09 ರಿಂದ ಅ.14ರವರೆಗೆ ವಿಶೇಷ ಬಸ್​ಗಳು ಕಾರ್ಯಚರಣೆ ನಡೆಸಲಿದ್ದು. ಈ ಕೆಳಗಿನ ಬಸ್ ನಿಲ್ದಾಣಗಳಿಂದ ಬಸ್​ಗಳು ಕಾರ್ಯಾಚರಣೆ ನಡೆಸಲಿವೆ.

* ಕೆಂಪೇಗೌಡ ಬಸ್ ನಿಲ್ದಾಣ

* ಮೈಸೂರು ರಸ್ತೆ ಬಸ್ ನಿಲ್ದಾಣ

* ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ

 

 

 

RELATED ARTICLES

Related Articles

TRENDING ARTICLES