Wednesday, October 16, 2024

ವಾಯುಭಾರ ಕುಸಿತ : ರಾಜ್ಯದಲ್ಲಿ4ದಿನ ಭಾರೀ ಮಳೆ ಸಾಧ್ಯತೆ..!

ಬೆಂಗಳೂರು : ಇಂದಿನಿಂದ (ಅ.11) ಅಕ್ಟೋಬರ್ 14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ನೀಡಿದ್ದು. ಬಹುತೇಕ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್​ ಜಾರಿ ಮಾಡಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಬ್ಬರದ ಮಳೆಯಾಗುವ ಸಾಧ್ಯತೆ ಇದ್ದು. ಬೆಂಗಳೂರಿನಲ್ಲಿ ಅಕ್ಟೋಬರ್ 16ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ್ದು ರಾಜ್ಯದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು
ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಬೆಳಗಾವಿ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ,

ತುಮಕೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,

ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ,

ಬೆಂಗಳೂರು ನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್​ ಮಾಡಲಾಗಿದೆ.

RELATED ARTICLES

Related Articles

TRENDING ARTICLES