Wednesday, October 16, 2024

ವಿಶ್ವವಿಖ್ಯಾತ ಜಂಬೂಸವಾರಿಗೆ ಸಜ್ಜಾದ ಅರಮನೆ ನಗರಿ

ಮೈಸೂರು: ನಾಡ ಹಬ್ಬ ಮೈಸೂರು ದಸರಾ 2024ಕ್ಕೆ ಇಡೀ ರಾಜ್ಯ ಸಿದ್ದತೆ ನಡೆಸಿದ್ದು. ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಜಂಬೂಸವಾರಿ ವಿಕ್ಷೀಸಲು ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು. ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.

ಬೆಳಗ್ಗೆ 8ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಆರಂಭವಾಗಿದ್ದು. ಮೆರವಣಿಗೆ ಮೂಲಕ ಅಂಬಾವಿಲಾಸ ಅರಮನೆ ತಲುಪಲಿರುವ ಉತ್ಸವ ಮೂರ್ತಿ. ಮದ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನಡೆಯಲಿದ್ದು. ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆ ನೆರವೇರಿಸಲಿರುವ ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ಸಾಗಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಪ್ರದರ್ಶನಗೊಳ್ಳಲಿದ್ದು.ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ.

ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆ ನಡೆಸಲಿದ್ದಾರೆ ಮತ್ತುಪೋಲಿಸರಿಂದ ಗೌರವ ವಂದನೆ ಸ್ವೀಕಾರ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES