ರಾಮನಗರ: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸೇತುವೆಯೊಂದು ಕೊಚ್ಚಿ ಹೋಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಕೊಚ್ಚಿಹೋಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮಂಚನಬೆಲೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು. ಜಲಾಶಯದಿಂದ ನೀರು ಹೊರ ಬಿಟ್ಟ ಹಿನ್ನಲೆ ಸೇತುವೆ ಕೊಚ್ಚಿ ಹೋಗಿದೆ. ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕೊಚ್ಚಿಹೊಗಿದ್ದು
ಕಳೆದ ಎರಡು ವರ್ಷಗಳ ಹಿಂದೆ ಮಂಚನಬೆಲೆ ಗ್ರಾಮದಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ ಎಂದು ಮಾಹಿತಿ ದೊರೆತಿದೆ.
ಸುಮಾರು 30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ ಬೆಂಗಳೂರು ಹಾಗೂ ರಾಮನಗರದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಈಗ ಸೇತುವೆ ಕೊಚ್ಚಿ ಹೋಗಿರುವ ಹಿನ್ನಲೆ ಸಾರ್ವಜನಿಕರು, ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಿ.ಮೀ ಗಟ್ಟಲೆ ಸುತ್ತಾಡಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಹಿತಿ ದೊರೆತಿದೆ.