Thursday, December 26, 2024

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ದಾಳಿಯ ಎಚ್ಚರಿಕೆ ನೀಡಿದ ಖಲಿಸ್ಥಾನಿಗಳು

ದೆಹಲಿ : ಇತ್ತೀಚೆಗೆ ಭಾರತದ ವಾಯುಯಾನದ ಮೇಲೆ ಉಗ್ರರ ಕಣ್ಣು ಬಿದ್ದಿದ್ದು. ಪ್ರತಿದಿನ ವಿಮಾನಗಳಿಗೆ ಬೆದರಿಕೆ ಕರೆಗಳು ಬರುವುದು ಸಾಮಾನ್ಯವಾಗಿದೆ. ಆದರೆ ಇತ್ತೀಚೆಗೆ ಭಾರತದ ಮೋಸ್ಟ ವಾಟೆಂಡ ಉಗ್ರ ಗುರು ಪತ್ವಂತ್ ಸಿಂಗ್ ಪನ್ನು ಹೊಸ ಬೆದರಿಕೆಯಾಕಿದ್ದು. ವಿಮಾನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಪತ್ವಂನ್ ಸಿಂಗ್ ಪನ್ನು ವಿಮಾನ ಪ್ರಯಾಣಿಕರಿಗೆ ನ.1ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ಬೆದರಿಕೆ ಹಾಕಿದ್ದಾನೆ .ಖಾಲಿಸ್ತಾನ ಪ್ರತ್ಯೇಕ ರಾಷ್ಟ್ರದ ಹೋರಾಟಗಾರ ಗುರು ಪತ್ವಂತ್ ಸಿಂಗ್ ಪನ್ನು ಹೊಸ ಬೆಂದರಿಕೆ ಹಾಕಿದ್ದು. ನವೆಂಬರ್ 1ರಿಂದ 19ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾನೆ.

ಕಾಕತಾಳೀಯವೆಂಬಂತೆ, ಸಿಖ್ ಹತ್ಯಾಕಾಂಡಕ್ಕೆ 40 ವರ್ಷ ಪೂರ್ಣಗೊಳ್ಳುವ ನಿರ್ದಿಷ್ಟ ದಿನಾಂಕದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ಕೆನಡಾ ಮತ್ತು ಅಮೆರಿಕ ಪೌರತ್ವ ಹೊಂದಿರುವ ಸಿಕ್ಸ್ ಫಾರ್ ಜಸ್ಟೀಸ್ ಸಂಸ್ಥಾಪಕ ಪನ್ನು, ಕಳೆದ ವರ್ಷ ಸಹ ಇದೇ ಅವಧಿಯಲ್ಲಿ ಬೆದರಿಕೆ ಒಡ್ಡಿದ್ದನು.

ಬಾಂಬ್ ಇಟ್ಟಿರುವುದಾಗಿ ಭಾರತದ ವಿವಿಧ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಈ ಸಂದರ್ಭದಲ್ಲೇ ಪನ್ನು ಸಹ ಬೆದರಿಕ ಹಾಕಿದ್ದಾರೆ. ನಿಜ್ಜರ್‌ ಹತ್ಯೆ ಸೇರಿದಂತೆ ಕೆನಡಾದಲ್ಲಿರುವ ಖಾಲಿಸ್ತಾನ ಹೋರಾಟಗಾರರನ್ನು ಭಾರತ ಗುರಿಯಾಗಿಸಿಕೊಂಡಿದೆ ಎಂದು ಕೆನಡಾ ಆರೋಪಿಸುತ್ತಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಘರ್ಷ ನಡೆಯುತ್ತಿದೆ ಈ ಸಂದರ್ಭದಲ್ಲಿ ಇಂತಹ ಬೆದರಿಕೆ ಕರೆಗಳು ಹೆಚ್ಚಾಗುತ್ತಿದ್ದು ವಿಮಾನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

RELATED ARTICLES

Related Articles

TRENDING ARTICLES