ಹಾವೇರಿ: ಮಗ ಹೃದಯಾಘಾತದಿಂದ ಸಾವನಪ್ಪಿರುವ ಸುದ್ದಿ ಕೇಳಿ ತಂದೆಯು ಸಾವನ್ನಪ್ಪಿರುವ ಮನಕಲಕುವ ಘಟನೆ ಹಾವೇರಿ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.
ಹೃದಯಾಘಾತದಿಂದ ಸಾವನ್ನಪ್ಪಿದ ಮಗನ ಸಾವಿನ ಸುದ್ದಿ ತಿಳಿದು ತಂದೆಯು ಹೃದಯಾಘಾತದಿಂದ ಸಾವನಪ್ಪಿದ್ದು. ಒಂದೇ ದಿನ ತಂದೆ ಮಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತಂದೆ ಡಾ.ವೀರಭದ್ರಪ್ಪ ಗುಂಡಗಾವಿ (68) ಮತ್ತು ಮಗ ಡಾ.ವಿನಯ ಗುಂಡಗಾವಿ (38) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ತಂದೆ ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಕೆ ಮಾಡುತ್ತಿದ್ದರು ಎಂದು ತಿಳಿಯಲಾಗಿದ್ದು
ತಂದೆ ಮಗನನ್ನ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಕುಟುಂಬ ಮಗ ಡಾ.ವಿನಯ ಗುಂಡಗಾವಿ ಹುಬ್ಬಳ್ಳಿಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು ಮತ್ತು ತಂದೆ ಡಾ.ವೀರಭದ್ರಪ್ಪ ಗುಂಡಗಾವಿ ಹಾವೇರಿಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಮಾಹಿತಿ ದೊರೆತಿದೆ.