Wednesday, January 22, 2025

ಕಟ್ಟಡದಿಂದ ಬಿದ್ದು ಹಾಸ್ಟೆಲ್ ವಿದ್ಯಾರ್ಥಿನಿ ಸಾವು: ಅನುಮಾನ ವ್ಯಕ್ತಪಡಿಸಿದ ಪೋಷಕರು

ಬೆಳಗಾವಿ:  ವಸತಿ ಶಾಲೆಯ ಮೊದಲನೇ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಮರನ ಹೊಂದಿರುವ ಘಟನೆ ಬೆಳಗಾವಿ ಹಿರೇಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಆಪ್ರೀನ್ ಜಮಾದಾರ 17 ಮೃತ ದುರ್ದೈವಿ ವಿದ್ಯಾರ್ಥಿನಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ವಿಧ್ಯಾರ್ಥಿನಿಯಾಗಿರುವ ಆಪ್ರೀನ್ ಜಮಾದಾರ (17) ಆಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತ ಪಡಿಸಲಾಗಿದೆ. ಆದರೆ ಯುವತಿಯ ಪೋಶಕರು ಇದು ಸಹಜ ಸಾವಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂದು ಪರೀಕ್ಷೆ ಹಿನ್ನೆಲೆ ಮಧ್ಯ ರಾತ್ರಿ ಮೊದಲ ಮಹಡಿಯಲ್ಲಿ ಓದುತ್ತ ಕುಳಿತಿದ್ದ ವಿದ್ಯಾರ್ಥಿನಿ ಕಟ್ಟಡದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ರಾತ್ರಿ ಸಮಯ 2:30 ಕ್ಕೆ ವಿದ್ಯಾರ್ಥಿನಿ ಹಾಸ್ಟೆಲ್‌ನಿಂದ ಬಿದ್ದಿದಾಳೆ ಎಂದು ಹಾಸ್ಟೆಲ್ ಸಿಬ್ಬಂದಿ ಹೇಳಿದ್ದಾರೆ. ಆದರೆ ನಮಗೆ ಬೆಳಗಿನ ಜಾವ 4 ಗಂಟೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.ನಾವು ಹುಡುಗಿಯ ಶವ ನೋಡಿದಾಗ ತಲೆ ಸೇರಿದಂತೆ ಕಿವಿಯಲ್ಲಿಯೂ ರಕ್ತಸ್ರಾವ ಆಗಿದೆ.ಇದು ಸಹಜ ಸಾವಲ್ಲ ಎಂದು ಪೋಷಕರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES