Thursday, December 5, 2024

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಆಕ್ರೋಶ: ರಾಷ್ಟ್ರಪತಿ ಭವನಕ್ಕೆ ನುಗ್ಗಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗುತ್ತಿದ್ದರೂ ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು.

ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಸಾಗಲು ಯತ್ನಿಸಿದರು. ನಂತರ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ಅವರನ್ನು ತಡೆದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ನಂತರ ಪ್ರತಿಭಟನಾಕಾರರು ಹಿಂದೆ ಸರಿದಿದ್ದಾರೆ. ಲಾಠಿ ಚಾರ್ಜ್ ನಿಂದಾಗಿ ಕೆಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಢಾಕಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಾಸ್ತವವಾಗಿ, ಇತ್ತೀಚೆಗೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ,. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಅವರು ಹೇಳಿದ್ದರು. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ಈ ಹೇಳಿಕೆಯ ನಂತರ, ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರದ ಸಾಂವಿಧಾನಿಕತೆಯ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದವು. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೀಡಿದ ಹೇಳಿಕೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ

RELATED ARTICLES

Related Articles

TRENDING ARTICLES