Monday, December 23, 2024

By election 2024 : ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಕಾಂಗ್ರೇಸ್ ಸೇರ್ಪಡೆಯಾಗಲಿರುವ ಸಿಪಿವೈ!

ಬೆಂಗಳೂರು : ಚನ್ನಪಟ್ಟನ ಉಪಚುನಾವಣೆ ಅಖಾಡ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಮೈತ್ರಿ ಪಾಳಯದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎಂಬ ಕುತೂಹಲ ಮೂಡುತ್ತಿರುವ ಹೊತ್ತಿನಲ್ಲಿ ಸಿ.ಪಿ ಯೋಗೇಶ್ವರ ನಡೆ ರಾಜಕೀಯ ರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ.

ಬಿಜೆಪಿ ಪಕ್ಷದಿಂದ ಟಿಕೆಟ್ ಅಕಾಂಕ್ಷಿಯಾಗಿರುವ ಸಿ.ಪಿ ಯೋಗೇಶ್ವರ್​ಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದಂತೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದು. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮರ್​ರನ್ನು ಭೇಟಿಯಾಗಿರುವ ಸಿಪಿವೈ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಸಿಎಂ ಮತ್ತು ಡಿಸಿಎಂ ಜೊತೆ ಕೆಪಿಸಿಸಿ ಕಾರ್ಯಲಯಕ್ಕೆ ಪ್ರಯಾಣ ಬೆಳೆಸಿರುವ ಸಿಪಿವೈ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES