Wednesday, December 25, 2024

ಕತ್ತು ಸೀಳಿ ಗೆಳೆಯನನ್ನೇ ಕೊ* ಮಾಡಿದ ಸ್ನೇಹಿತ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಉಡುಪಿಯಲ್ಲಿ ನಿನ್ನೆ ನಡೆದಿದ್ದು ಈ ಸಂಬಂಧ ತನಿಖೆ ತೀವ್ರಗೊಂಡಿದೆ.ನಗರದ ಹಳೆ KSRTC ಬಸ್ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಿನ್ನೆ ಈ ಕೊಲೆ ನಡೆದಿತ್ತು.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32)ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. n

ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದ.ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕರೆದೊಯ್ದಿದ್ದರು.

ಈ ಕುರಿತು ಮಾಹಿತಿ ನೀಡಿರುವ ಉಡುಪಿ ಎಸ್ಪಿ ಡಾ.ಅರುಣ್ ಕೆ ,ಈ ಕೊಲೆಯು ಹಣಕಾಸಿನ ವಿಚಾರವಾಗಿ ನಡೆದಿದೆ.ಸ್ನೇಹಿತ ಸಾಲದ ಹಣ ಕೇಳುತ್ತಿದ್ದ.ಇದರಿಂದ ಕೋಪಗೊಂಡ ಸ್ನೇಹಿತ ಕುಡಿದ ಮತ್ತಿನಲ್ಲಿ ಕೊಲೆಗೈದಿದ್ದಾನೆ.ಈ ಸಂಬಂಧ ತನಿಖೆ ಪೂರ್ಣಗೊಳಿಸಿ ಅಗತ್ಯ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES