Thursday, December 5, 2024

ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಲ ವಾಂತಿ ಸಾಗಿಸುತ್ತಿದ್ದ ಇಬ್ಬರು ಅಂದರ್ !

ಚಾಮರಾಜನಗರ : ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್ ) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ ಆಶೋಕಪುರಂ ನಿವಾಸಿ ವಸಂತ ಕುಮಾರ್(50) ರಾಮನಗರ ಜಿಲ್ಲೆಯ ಕನಕಪುರ ನಿವಾಸಿ ವೈರಮುಡಿ(40) ಬಂಧಿತರು ಎಂಬ ಮಾಹಿತಿ ದೊರೆತಿದೆ.

ಅಂಬರ್ ಗ್ರೀಸ್ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿಟ್ಟಿದ್ದ 4.386 ಕೆಜಿ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದೀಗ ಮೂವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಚ್‌ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಮಾಧ್ಯಮದವರಿಗೆ ಮಾಹಿತಿ ನೀಡಿರುವ ಪೋಲಿಸರು. ವಸ್ತುವನ್ನು ವಶಪಡಿಸಿಕೊಂಡ ನಂತರ, ಹೆಚ್ಚಿನ ತನಿಖೆಗಾಗಿ ಅದರ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ಪ್ರಾಣಿಗಳ ಉತ್ಪನ್ನವನ್ನು ಸಾಂಪ್ರದಾಯಿಕ ಔಷಧಿಗಳಿಗೆ ಮತ್ತು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸುವುದರಿಂದ ಅಂಬರ್ಗ್ರಿಸ್ಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ಅದನ್ನು ಕಾನೂನುಬಾಹಿರವಾಗಿ ವಿದೇಶಗಳಿಗೆ ರಫ್ತು ಮಾಡಲಾಗುತ್ತದೆ, ವಿಶೇಷವಾಗಿ ಅರಬ್ ರಾಷ್ಟ್ರಗಳಿಗೆ ಇದನ್ನು ಹೆಚ್ಚು ರಫ್ತು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES