Thursday, December 5, 2024

ಲಿಫ್ಟ್​ಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಾಲಕ ಸಾವು

ಬೆಂಗಳೂರು : ಲಿಪ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ. ಆಟವಾಡುವಾಗ ಮಳೆನೀರು ತುಂಬಿದ್ದ ಗುಂಡಿಯಲ್ಲಿ ಬಿದ್ದು ಬಾಲಕ  ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ದೊರೆತಿದೆ.

ಐದು ವರ್ಷದ ಸುಹಾಸ್ ಗೌಡ ಸಾವನ್ಪಪ್ಪಿರುವ ಬಾಲಕನಾಗಿದ್ದು.ಇದೇ ತಿಂಗಳ ಅಕ್ಟೋಬರ್ 23 ನೇ ತಾರೀಖು ಬೆಳಗ್ಗೆ 9 ಗಂಟೆ ವೇಳೆ  ಘಟನೆ ನಡೆದಿದೆ. ಕನ್ನಮಂಗಲದ ಮಿಲ್ಕ್ ಡೈರಿಯ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿತ್ತು ಈ ಕಟ್ಟಡದಲ್ಲಿ ಲಿಪ್ಟ್ ಗಾಗಿ 5 ಅಡಿ ಗುಂಡಿ ತೋಡಲಾಗಿತ್ತು. ಈ ಗುಂಡಿಯಲ್ಲಿ ನೀರು ತುಂಬಿದ್ದ ಹಿನ್ನಲೆ ಬಾಲಕ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ದೊರೆತಿದೆ.

ಆ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರು ಸಿಬ್ಬಂದಿಗಳು ಯಾವುದೇ ಮುನ್ನೆಚ್ಚರಿಕೆ ವಹಿಸದೆ ಇರುವುದರಿಂದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್ ಐ ಆರ್ ದಾಖಲು ಮಾಡಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES