Sunday, December 15, 2024

ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಆರಂಭ: ನ. 3ರವರೆಗೆ ದರ್ಶನ

ಹಾಸನ : ಈ ತಾಯಿಯ ದರ್ಶನ ವರುಷಕ್ಕೊಮ್ಮೆ ಮಾತ್ರ. ಒಮ್ಮೆ ಹಚ್ಚಿಟ್ಟ ಮಹಾದೀಪ ವರ್ಷಪೂರ್ತಿಯೂ ಉರಿಯುತ್ತೆ. ಮುಡಿಸಿದ ಹೂಗಳು ಬಾಡಲ್ಲ. ಇಂತಹ ಪವಾಡಗಳನ್ನ ಸೃಷ್ಟಿಸಿ ಬೇಡಿದ ವರವನ್ನ ನೀಡುವ ಹಾಸನಾಂಬೆಯ ದರ್ಶನ ಇವತ್ತಿನಿಂದ ಆರಂಭವಾಗಲಿದೆ. ಲಕ್ಷಾಂತರ ಭಕ್ತರು ಹರಿದು ಬರಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ.

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ (Hassan) ಅಧಿದೇವತೆ, ಶಕ್ತಿದೇವತೆ ಹಾಸನಾಂಬೆಯ ದರ್ಶನೋತ್ಸವ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆಶ್ವೀಜ ಮಾಸದ ಮೊದಲವಾದ ಇಂದು ಮಧ್ಯಾಹ್ನ 12 ಗಂಟೆ ನಂತರ ದೇವಿಯ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ನ.3ರ ಬೆಳಿಗ್ಗೆವರೆಗೆ ದೇವಿಯ ದರ್ಶನೋತ್ಸವಕ್ಕೆ ಅವಕಾಶವಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಹಾಸನದಲ್ಲಿ ನೆಲೆಸಿರೋ ಈ ಶಕ್ತಿದೇವತೆಯ ದೇವಸ್ಥಾನದ ಗರ್ಭಗುಡಿ ದ್ವಾರ ಬಾಗಿಲು ಇವತ್ತಿನಿಂದ ತೆರೆಯಲಿದೆ. ಇಂದಿನಿಂದ ನವೆಂಬರ್ 3ರವರೆಗೆ ದೇವಸ್ಥಾನ ಓಪನ್ ಇರಲಿದೆ. ಜಿಲ್ಲಾಡಳಿತ ಮತ್ತು ಅರ್ಚಕರ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಬಾಗಿಲನ್ನ ತೆಗೆಯಲಾಗುತ್ತದೆ. ಒಟ್ಟು 9 ದಿನಗಳ ಕಾಲ ಈ ಬಾರಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡುತ್ತಿದ್ದು, ಮೊದಲನೆಯ ಮತ್ತು ಕಡೆಯ 2 ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿಲ್ಲ. ಇನ್ನೂ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಉದ್ದದ ಸಾಲುಗಳನ್ನ ನಿರ್ಮಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಮಾಡಿಕೊಂಡಿದೆ. ಅಲ್ಲದೇ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಪ್ರತ್ಯೇಕ ಮಳಿಗೆಗಳನ್ನ ಮಾಡಿದೆ.

1400 ಪೋಲಿಸರ ನಿಯೋಜನೆ

ಇನ್ನು ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬರೋಬ್ಬರಿ 1400ಕ್ಕೂ ಹೆಚ್ಚು ಪೋಲಿಸರ ರಕ್ಷಣಾ ಕವಚವನ್ನು ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಪೋಲಿಸ್ ಅಧಿಕಾರಿಗಳನ್ನು ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಪೋಲಿಸರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಒಟ್ಟಾರೆಯಾಗಿ 5 ಜನ ಎಸ್ಪಿ, 12 ಡಿವೈಎಸ್ಪಿ , 74 ಮಂದಿ ಸಿಪಿಐ, 126 ಮಂದಿ ಪಿಎಸ್ಐಗಳನ್ನು ನಿನಯೋಜನೆ ಮಾಡಲಾಗಿದೆ ಎಂದು ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES