ಬೆಂಗಳೂರು : ಕಳೆದ ವರ್ಷ ಪಟಾಕಿ ದುರಂತ ಹಿನ್ನೆಲೆ ಈ ಭಾರೀ ಯಾವುದೇ ಅವಘಡವಾಗದಂತೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ರೂಪಿಸಿದೆ. ಮಾರಾಟಗಾರರಿಗೆ ಹಲವಾರು ನಿಯಮಗಳನ್ನು ವಿಧಿಸಿದ್ದು ಅದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ದೊರೆತಿದೆ.
ಸದ್ಯ ಈ ವರ್ಷ ಪಟಾಕಿಯಿಂದ ಯಾವುದೇ ಅವಘಡವಾಗದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ. ಬೆಂಗಳೂರಿನ ವಸತಿ, ವಾಣಿಜ್ಯ ಸಂಕೀರ್ಣ ಸ್ಥಳದಲ್ಲಿ ಪಟಾಕಿ ಸಂಗ್ರಹವನ್ನು ನಿಷೇದಿಸಿದೆ. ಪಟಾಕಿ ದಾಸ್ತಾನು ಮಾಡಲು ಕಡ್ಡಾಯವಾಗಿ ಅನುಮತಿ ಪಡೆದಿರಬೇಕು, ಸುರಕ್ಷಿತ ಪ್ರದೇಶದಲ್ಲಿ ಮಾತ್ರ ಪಟಾಕಿ ಸಂಗ್ರಹಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ದೊರೆತಿದೆ.
ದೀಪಾವಳಿ ಹಬ್ಬಕ್ಕೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿದ್ದು,ಸಗಟು ದರದಲ್ಲಿ ಪಟಾಕಿ ಮಾರಾಟ ಬಗ್ಗೆ ಜಿಲ್ಲಾಡಳಿತ ಈ ಬಾರಿ ವಿಶೇಷ ನಿಗಾವಹಿಸಿದ್ದು. ಕಳೆದ ವರ್ಷ ಆನೇಕಲ್‌ನಲ್ಲಿ ಅಕ್ರಮ ಪಟಾಕಿ ಗೋದಾಮಿನಿಂದ ಅನಾಹುತ ಸಂಭವಿಸಿ 14 ಜನ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ,ಈ ಬಾರಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಜಿಲ್ಲಾಡಳಿತ ಕಮಾಹಿತಿ ನೀಡಿದೆ.
ಜಿಲ್ಲಾಡಳಿತ ರೂಪಿಸಿರುವ ನಿಯಮಗಳ
- ಹಳೆಯ ಲೈಸನ್ಸ್ ಆಧಾರದ ಮೇಲೆ ಗೋದಾಮುಗಳಲ್ಲಿ ಪಟಾಕಿ ಸಂಗ್ರಹಿಸುವಂತಿಲ್ಲ.
- ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು, ಅಗ್ನಿಶಾಮಕ ಇಲಾಖೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ.
- ಸುರಕ್ಷಿತ ಎನಿಸಿದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲು ನಿರ್ಧಾರ. ಸುರಕ್ಷತೆಯ ದೃಷ್ಟಿಯಿಂದ ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ.
- ಪಟಾಕಿ ಮಾರಾಟ ಸ್ಥಳದಲ್ಲಿ ಅಗ್ನಿ ನಿರೋಧಕಗಳನ್ನು ಕಡ್ಡಾಯವಾಗಿ ಇಟ್ಟಿರಬೇಕು.
- ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮಗನ್ನು ರೂಪಿಸಲಾಗಿದೆ.