Monday, December 23, 2024

ಚನ್ನಪಟ್ಟಣಕ್ಕೆ ನಿಖಿಲ್ ಅಭ್ಯರ್ಥಿ : ಸಿಪಿವೈ ವಿರುದ್ಧ ಕಣಕ್ಕಿಳಿದ ಅಭಿಮನ್ಯು

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್​ಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದ್ದು. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಕುಮಾರ್​ಸ್ವಾಮಿ ಮಾಹಿತಿ ನೀಡಿದರು.

ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಜೆಡಿಎಸ್. ನಿಖಿಲ್ ಕುಮಾರ​ಸ್ವಾಮಿ ಈ ಬಾರಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ ನಿಖಿಲ್ ನಿಮ್ಮ ಮನೆ ಮಗ, ಅವನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಎಂದು ಭಾವನಾತ್ಮಕವಾಗಿ ಹೇಳಿದರು.

ಹೀಗಾಗಲೆ ಎರಡು ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿರುವ ನಿಖಿಲ್ ಮತ್ತೊಮ್ಮೆ ಸ್ಪರ್ಧಿಸಿದ್ದು. ಈ ಬಾರಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

RELATED ARTICLES

Related Articles

TRENDING ARTICLES