Thursday, December 5, 2024

ಬೈಕ್ ಲಾರಿ ನಡುವೆ ಡಿಕ್ಕಿ : ಇಬ್ಬರು ಸವಾರರು ದುರ್ಮರಣ

ಶಿವಮೊಗ್ಗ: ಬೈಕ್ ಹಾಗೂ ಅಶೋಕ್ ಲೇಲ್ಯಾಂಡ್ ಲಾರಿಯ  ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗೌತಮಪುರದಲ್ಲಿ ನಡೆದಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ದುರ್ಘಟನೆ ಘಟಿಸಿದ್ದು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಂದೂರು ಗ್ರಾಮದ ವಾಸಪ್ಪ (50 ) ಹಾಗೂ ಅವರ ಅಳಿಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ವಾಸಪ್ಪ ಮತ್ತು ಆತನ ಅಳಿಯ ತೆರಳುತ್ತಿದ್ದರು. ಟಿವಿಎಸ್  ಎಕ್ಸೆಲ್(TVS XL) ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು. ಎದುರುಗಡೆಯಿಂದ ಬಂದ ಅಶೋಕ್ ಲೇಲ್ಯಾಂಡ್  ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಆನಂದ ಪುರ ಪೋಲಿಸರು ಬಂದು ಪರಿಶೀಲನೆ ನಡೆಸಿದ್ದು. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES