Wednesday, January 22, 2025

ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ : ಯುವತಿಗೆ ಅನ್ಯಕೋಮಿನ ಯುವಕನ ಧಮ್ಕಿ

ದಕ್ಷಿಣ ಕನ್ನಡ : ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೀಡಾಗಿ ಸಾಯೋದರ ಬದಲು ನಾನೇ ಸಾಯ್ತೀನಿ ಎಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಸೂರತ್ಕಲನಲ್ಲಿ ನಡೆದಿದೆ.

ಯುವತಿಯೊಬ್ಬಳು ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

ಕಳೆದ ಕೆಲವು ದಿನಗಳ ಹಿಂದೆ ಯುವತಿಯ ಅಣ್ಣನಿಗೆ ಯುವಕ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಹಾಕಿದ್ದರು, ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ.

ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಶಕ್ಕೆ ಪಡೆದು ವಿಚಾರಣೆ ವೇಳೆ ಆರೋಪಿ ವಿರುದ್ಧ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ.

ಈ ಬಳಿಕವೂ ಆರೋಪಿ ಯುವತಿಯ ಸಹೋದರನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್​ನೋಟ್​ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೆತ್​​ನೋಟ್​ನಲ್ಲಿ ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು ಎಂದು ಡೆತ್​ನೋಟ್​ ಬರೆದಿದ್ದಾಳೆ.

RELATED ARTICLES

Related Articles

TRENDING ARTICLES