Wednesday, January 22, 2025

ಗ್ಯಾರಂಟಿ ಎಫೆಕ್ಟ್ : ಸೀಟ್​ಗಾಗಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಬೆಳಗಾವಿ : ಸರ್ಕಾರಿ ಬಸ್​ಗಳಲ್ಲಿ ಹಲ್ಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಇದೀಗ ಬಸ್​ನಲ್ಲಿ ಸೀಟ್​ಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಇದರಿಂದಾಗಿ ಸರ್ಕಾರಿ ಬಸ್​ಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಬಸ್​ಗಳಲ್ಲಿ ಕುಳಿತು ಕೊಳ್ಳವ ಸೀಟಿಗಾಗಿ ಜಗಳಗಳ ಪ್ರಮಾಣವು ಹೆಚ್ಚಾಗುತ್ತಿದೆ. ಅದೇ ರೀತಿಯಾಗಿ ಬೆಳಗಾವಿ ಬಸ್​ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದ ಮಹಿಳೆಯರು ವಾಪಾಸು ಹೋಗುವ ಸಮಯದಲ್ಲಿ ಘಟನೆ ನಡೆದಿದೆ. ಬಸ್​ನಲ್ಲಿ ಸೀಟುಗಳು ಪುಲ್​ ಆದ ಹಿನ್ನಲೆ. ಸೀಟಿಗಾಗಿ ಮಹಿಳೆಯರ ನಡುವೆ ಜಗಳವಾಗಿ ಜಗಳ ತಾರಕಕ್ಕೆ ಹೋಗಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಮೊದಲಿಗೆ ಪರಸ್ಪರ ಬೈದಾಡಿಕೊಂಡ ಮಹಿಳೆಯರು ನಂತರ  ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

RELATED ARTICLES

Related Articles

TRENDING ARTICLES