Wednesday, January 22, 2025

ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲು : ಮೃತದೇಹಕ್ಕಾಗಿ ಶೋಧ

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.

ಘಟನೆಯಲ್ಲಿ ನೀರುಪಾಲಾಗಿದ್ದ ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ.

ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು. ಅದರಂತೆ ಇಂದು ಬೆಳಿಗ್ಗೆ ತನ್ನ ಇನ್ನಿಬ್ಬರು ಸ್ಥಳೀಯ ಸ್ನೇಹಿತರ ಜೊತೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಇಬ್ಬರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES